en
Feedback
UPSC / KPSC / KEA Exams 🏘📚

UPSC / KPSC / KEA Exams 🏘📚

Open in Telegram

ಎಲ್ಲಾ ರೀತಿಯ ಸ್ಪರ್ಧಾತ್ಮಕ ಹಾಗೂ ಶೈಕ್ಷಣಿಕ ಪರೀಕ್ಷೆಗಳಿಗಾಗಿ. 😊

Show more
2 392
Subscribers
No data24 hours
-27 days
-1530 days
Posts Archive
Repost from N/a
A complete guide to Computer Knowledge Most Helpful for FDA/SDA EXAM of KEA AND KPSC FDA SDA ಗೆ ಉಪಯುಕ್ತವಾಗುವ ಕಂಪ್ಯೂಟರ್ ತರಗತಿಗಳು Video Classes: https://youtu.be/SFyTl1Wd-yY Join our telegram channel: https://t.me/ChethansClasses

ಪ್ರತಿದಿನ ಕನ್ನಡ ತರಗತಿಗಳು KSET and UGC-NET ಗಾಗಿ. To join the meeting on Google Meet, click this link: https://meet.google.com/tpn-vjdr-muu Or open Meet and enter this code: tpn-vjdr-muu

Repost from N/a
National Pension Scheme | UPSC | KPSC | ಹೊಸ ಪಿಂಚಣಿ ಯೋಜನೆ. https://youtu.be/73D0F_xzhq8

ಕಾವ್ಯದ ಮೂರು ದನಿಗಳು | ಟಿ ಎಸ್ ಎಲಿಯಟ್ | Three voices of poem | T S Elliott https://youtu.be/AAaMGvmrdF0

Old Question Papers | ಹಳೆಯ ಪ್ರಶ್ನೆ ಪತ್ರಿಕೆಗಳು: https://www.youtube.com/playlist?list=PLDQplXIwxGT0H_yMe0qMYt4DC8j_X1sTK

ಎಂ.ಎ ಕನ್ನಡ ಪರೀಕ್ಷೆ ಬರೆಯುವವರಿಗೆ, ನಮ್ಮ ಹಿಂದಿನ ತರಗತಿಗಳು. ಕಾವ್ಯ ಮೀಮಾಂಸೆ https://youtube.com/playlist?list=PLDQplXIwxGT3C6jVlqBhy7v8s28LWMa4s ಶಾಸನ ಅಧ್ಯಯನ https://youtube.com/playlist?list=PLDQplXIwxGT025A3xZMhB-XZNxFJpZ1Wm

ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ | Prajavani https://www.prajavani.net/karnataka-news/sara-abubakar-died-1004776.html

*ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು.*..!!🌟 *ಗಳಗನಾಥರು:-* 🙏🏻 ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು. ಸತ್ತ ಮೇಲೆ ಅಂತ್ಯಸಂಸ್ಕಾರ ಮಾಡಲೂ ಇವರ ಮನೆಯವರ ಬಳಿ ಹಣವಿರಲಿಲ್ಲ. ಪುಸ್ತಕಗಳಿಂದಲೇ ಇವರ ಅಂತ್ಯಸಂಸ್ಕಾರ ಮಾಡಬೇಕಷ್ಟೇಯೆಂದು ಅವರ ಮನೆಯವರು ಅ ಸಂದರ್ಭದಲ್ಲಿ ನೊಂದುಕೊಂಡು ನುಡಿದಿದ್ದರು. *ವಿ.ಸೀತಾರಾಮಯ್ಯ*🙏🏻 ಇವರು ದಿನಾ ಬೆಳಿಗ್ಗೆ ಹೊಟೇಲಿನಿಂದ ಹತ್ತು ಇಡ್ಲಿ ತರಿಸುತ್ತಿದ್ದರಂತೆ. ಅದರಲ್ಲಿ ಒಂದು ಇಡ್ಲಿಯನ್ನಷ್ಟೇ ತಾವು ತಿಂದು ಉಳಿದ ಒಂಬತ್ತು ಇಡ್ಲಿಯನ್ನು ಪ್ರಾಣಿ ಪಕ್ಷಿಗಳಿಗೆ ತಿನ್ನಿಸುತ್ತಿದ್ದರು. ಇದನ್ನು ಅವರು ತಮ್ಮ ಬದುಕಿನುದ್ದಕ್ಕೂ ದಿನಚರಿಯಂತೆ ಪಾಲಿಸುತ್ತಿದ್ದರು. *ದ.ರಾ.ಬೇಂದ್ರೆ:-*🙏🏻 ಇವರೊಮ್ಮೆ ದಾರಿಯಲ್ಲಿ ನಡೆದುಕೊಂಡು ಬರಬೇಕಾದರೆ ಚಪ್ಪಲಿ ಕಿತ್ತು ಹೋಗುತ್ತದೆ. ಚಪ್ಪಲಿಯನ್ನು ಕೈಯಲ್ಲಿ ಹಿಡಿದು ಸ್ವಲ್ಪ ದೂರ ನಡೆದುಕೊಂಡು ಬಂದಮೇಲೆ, ದಾರಿ ಪಕ್ಕ ಕೂತಿದ್ದ ಚಮ್ಮಾರ ಸಿಗುತ್ತಾನೆ. ಬಿರುಬಿಸಿಲು ಆಗಿದ್ದರಿಂದ ಬೇಂದ್ರೆ ಅಜ್ಜ ಛತ್ರಿ ಬಿಡಿಸಿಕೊಂಡಿದ್ದರು. ಚಮ್ಮಾರ ತಮ್ಮ ಚಪ್ಪಲಿಯನ್ನು ರಿಪೇರಿ ಮಾಡುವಾಗ ಅವರು ತಮ್ಮ ಛತ್ರಿಯನ್ನು ಬಿಸಿಲಲ್ಲಿದ್ದ ಚಮ್ಮಾರನಿಗೆ ಹಿಡಿದಿದ್ದರು..! ಇದರಿಂದ ಮುಜುಗರಗೊಂಡ ಚಮ್ಮಾರ, 'ನಾನು ದಿನಾ ಬಿಸಿಲಲ್ಲೇ ಕೂತು ಕೆಲಸ ಮಾಡುವವನು ನನಗಿದೆಲ್ಲ ಬೇಡ' ಅಂದ. ಅದಕ್ಕೆ ಬೇಂದ್ರೆ ಅಜ್ಜ "ನೀನಿಗ ನಿನ್ನ ಕೆಲಸ ಮಾಡುತ್ತಿದ್ದೀಯ, ನಾನೀಗ ನನ್ನ ಕೆಲಸ ಮಾಡುತ್ತಿದ್ದೇನೆ" ಅಂದರಂತೆ...! *ಡಿವಿಜಿ:-🙏🏻* ಡಿವಿಜಿಯವರು ತಮ್ಮ ಹೆಂಡತಿಯನ್ನು ಆಪ್ತರೊಬ್ಬರ ಮದುವೆಗೆ ಹೋಗಲು ಹೇಳಿ ತಾವು ಬೇರೊಂದು ಕಾರ್ಯಕ್ರಮಕ್ಕೆ ಹೋಗಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ಬಂದಾಗ ಹೆಂಡತಿ ಮನೆಯಲ್ಲಿರೋದನ್ನು ನೋಡಿ ಸಿಟ್ಟಾದ ಡಿವಿಜಿ, ಮದುವೆಗೆ ಯಾಕೆ ಹೋಗಲಿಲ್ಲವೆಂದು ಹೆಂಡತಿಯನ್ನು ಪ್ರಶ್ನಿಸಿದರು. ಅವರ ಪತ್ನಿ,'ಮಗನನ್ನು ಕಳಿಸಿದ್ದೇನೆ' ಅಂದರು. ಡಿವಿಜಿ, ಬಹಳ ಆತ್ಮೀಯರ ಮದುವೆ ಎಂದು ಹೇಳಿದ್ದೆನ್ನಲ್ಲ ನೀನೇ ಹೋಗಬೇಕಿತ್ತು ಎಂದು ಮತ್ತೊಮ್ಮೆ ಏರಿದ ಧ್ವನಿಯಲ್ಲಿ ಹೇಳಿದರು. ಆಗ ಅವರ ಪತ್ನಿ, 'ನನ್ನತ್ರ ಇರೋದು ಒಂದೇ ಸೀರೆ. ಅದು ಕೂಡ ಅಲ್ಲಿ ಇಲ್ಲಿ ಹರಿದಿದೆ. ಅದನ್ನು ಉಟ್ಕೊಂಡು ಮದ್ವೆಗೆ ಹೋದ್ರೆ ನನ್ ಯಜಮಾನ್ರ ಮಾನ ಹೋಗುತ್ತೆ. ಅದ್ಕೆ ಮಗನನ್ನು ಕಳಿಸಿದೆ ಅಂದರಂತೆ. ಈ ಮಾತನ್ನು ಕೇಳಿದ ಡಿವಿಜಿಯವರಿಗೆ ಮರು ಮಾತನಾಡಲು ಅವಕಾಶವೇ ಇರಲಿಲ್ಲ. *ಮಾಸ್ತಿ:-*🙏🏻 ಜಿಲ್ಲಾಧಿಕಾರಿಯಾಗಿದ್ದ ಮಾಸ್ತಿಯವರು ಒಮ್ಮೆ ಊರಭೇಟಿಗೆ ತೆರಳಿರುತ್ತಾರೆ. ದಾರಿ ಮಧ್ಯೆ ಬಾಯಾರಿಕೆ ಆದ್ದರಿಂದ ಸಾರ್ವಜನಿಕ ಬಾವಿಯಿಂದ ನೀರು ಸೇದುತ್ತಿದ್ದ ವ್ಯಕ್ತಿಯ ಬಳಿ ಒಂದು ಬೊಗಸೆ ಕುಡಿಯಲು ನೀರು ಕೇಳುತ್ತಾರೆ. ಅವನು ನೀರನ್ನು ಸೇದಿ ಮಾಸ್ತಿಯವರಿಗೆ ಕೊಡುವ ಬದಲು ಪಕ್ಕದಲ್ಲಿರುವ ಟ್ಯಾಂಕಿಗೆ ಸುರಿಯುತ್ತಾನೆ. ಮಾಸ್ತಿಯವರಿಗೆ ಅವನು ನೀರು ಕೊಡದ್ದು ನೋಡಿ ಮುಜುಗರವಾಗುತ್ತದೆ. ಮತ್ತೆ ಅವನು ಕೊಡವನ್ನು ಬಾವಿಗಿಳಿಸಿ ನೀರು ಸೇದುತ್ತಾನೆ. ಈ ಬಾರಿ ಮಾಸ್ತಿಯವರನ್ನು ಕರೆದು ಬೊಗಸೆ ಹಿಡಿಯುವಂತೆ ಹೇಳಿ ನೀರು ಸುರಿಯುತ್ತಾನೆ. ಮಾಸ್ತಿಯವರು ಆಶ್ಚರ್ಯದಿಂದ ಕೇಳುತ್ತಾರೆ ಆಗಲೆ ಯಾಕೆ ನೀನು ನನಗೆ ನೀರು ಕೊಡಲಿಲ್ಲ ಎಂದು. ಅದಕ್ಕವನು "ಸ್ವಾಮಿ, ಈ ಬಾವಿ ತೋಡಿಸುವ ಮೊದಲು ಡಿಸಿಯವರು, ಯಾರೇ ನೀರು ಸೇದಿದರು ಮೊದಲ ಕೊಡವನ್ನು ಪಕ್ಕದಲ್ಲಿರುವ ಟ್ಯಾಂಕಿಗೆ ಸುರಿಯಬೇಕು, ಅ ನೀರು ಪ್ರಾಣಿಪಕ್ಷಿಗಳಿಗೆ ಕುಡಿಯೋಕೆ ಉಪಯೋಗವಾಗಬೇಕು ಎಂದಿದ್ದರು. ಹೀಗಾಗಿ ಈ ಊರಿನವರು ಅವರ ಅ ಮಾತನ್ನು ಪಾಲಿಸುತ್ತಿದ್ದೇವೆ" ಎಂದ. ಅಂದಹಾಗೆ ಹಾಗೆ ಆದೇಶ ಮಾಡಿದ್ದ ಡಿಸಿ ಮಾಸ್ತಿಯವರೇ ಆಗಿದ್ದರು...!ಊರಿನವರ ಪ್ರಾಮಾಣಿಕತೆಯನ್ನು ನೋಡಿ ಮಾಸ್ತಿಯವರ ಕಣ್ಣುಗಳು ಒದ್ದೆಯಾಗಿದ್ದವು..! *ಈ ಮೇರು ಸಾಹಿತಿಗಳು ನಮ್ಮ ನಾಡಿಗೆ ಆಸ್ತಿ*